dr br ambedkar information in kannada
ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು.
ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದರು. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದರು. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು.
ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವವನ್ನು ಪಾಲಿಸುವುದೇ ಆಗಿದೆ.
ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ಕೂಡ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರ್.ಎಸ್.ಎಸ್ ನವರು ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು.
ಬಾಬಾ ಸಾಹೇಬರ ಸಂವಿಧಾನ ಜಾರಿಗೂ ಮೊದಲು ಮನುಷ್ಯ-ಮನುಷ್ಯರನ್ನು ತಾರತಮ್ಯದಿಂದ ಶೋಷಿಸುವ, ಅಸಮಾನತೆಯನ್ನು ಆಚರಿಸುವ ಅನಾಗರಿಕ ವ್ಯವಸ್ಥೆ ಮತ್ತು ಶೂದ್ರರು-ದಲಿತರು-ಮಹಿಳೆಯರಿಗೆ ಶಿಕ್ಷಣವನ್ನು ವಿರೋಧಿಸುವ ಅಲಿಖಿತವಾದ ಮನುಸ್ಮೃತಿಯ ಪದ್ಧತಿಗಳು ಭಾರತದಲ್ಲಿ ಜಾರಿಯಲ್ಲಿತ್ತು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ.
ಈ ಚರಿತ್ರೆಯನ್ನು, ಇತಿಹಾಸವನ್ನು ನಾವು ಮರೆಯಬಾರದು. ನಮಗೆ ಬಂದಿರುವ ಸ್ವಾತಂತ್ರ್ಯ ಸಫಲ ಆಗಬೇಕಾದರೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದರು.
ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ.
ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು.
ನಮ್ಮ ಸರ್ಕಾರ ಕೂಡ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆವು. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ.
ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು. ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ.
ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ.
– ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ದಿನಾಚರಣೆ, ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರವನ್ನು ವಿತರಣಾ ಸಮಾರಂಭದಲ್ಲಿ ನನ್ನ ಮಾತುಗಳು
ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ.
ಆರ್.ಎಸ್.ಎಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ.
ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ. ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ.
ಸಂವಿಧಾನದ ಧ್ಯೇಯೋದ್ದೇಶಗಳು ಎಷ್ಟರ ಮಟ್ಟಿಗೆ ಜಾರಿಯಾಗಿವೆ, ಏಕಿನ್ನೂ ಸಮಾನತೆಯ ಸಮಾಜ ನಿರ್ಮಾಣ ಆಗಿಲ್ಲ ಎನ್ನುವುದನ್ನು ಅವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಆಡಿದ ಎಚ್ಚರಿಕೆಯ ಮಾತುಗಳನ್ನು ನಾವು ಮರೆಯಬಾರದು.
ಪ್ರತಿಯೊಬ್ಬರಿಗೂ ಒಂದು ಓಟು, ಒಂದು ಮೌಲ್ಯ ಸಿಕ್ಕಿದೆ. ಆದರೆ ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿಲ್ಲ. ನಾವು ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ಹೋಗಲಾಡಿಸದಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬರು ನೀಡಿದ್ದರು.
ಅಂಬೇಡ್ಕರ್ ಅವರಿಗೆ ದೂರದೃಷ್ಟಿ ಇತ್ತು. ಆದ್ದರಿಂದಲೇ, ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇರಬೇಕು. ಕೆಟ್ಟವರ ಕೈಗೆ ಹೋದರೆ ಮೌಲ್ಯಗಳು ಸಾಯುತ್ತವೆ ಎಂದು ಎಚ್ಚರಿಸಿದ್ದರು.
ಆರ್.ಎಸ್.ಎಸ್ ಬಿಜೆಪಿಯ ಮಾತೃಸಂಸ್ಥೆ. ಇದರ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್ ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದರು. ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ ಆರ್.ಎಸ್.ಎಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸಲಿಲ್ಲ. ಈಗ ಈ ಆರ್.ಎಸ್.ಎಸ್ ದೇಶಭಕ್ತಿಯ ಪಾಠ ಮಾಡುತ್ತಿದೆ. ಆರ್.ಎಸ್.ಎಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ.
ಬಿಜೆಪಿ ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿದೆ. ಕಾಂಗ್ರೆಸ್ ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದೆ. ಇದೇ ಎರಡೂ ಪಕ್ಷಕ್ಕೂ ಇರುವ ವ್ಯತ್ಯಾಸ.
– ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನನ್ನ ಮಾತುಗಳು
ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು.
ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ.
ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ.
ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ.
ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು.
ಜೈ ಸಂವಿಧಾನ
ಅಂಬೇಡ್ಕರ್ ಅವರು ಚಿಕ್ಕ ವಯಸ್ಸಿನಲ್ಲಿ ಬಹಳಷ್ಟು ಕಷ್ಟ ಪಟ್ಟು ವಿದ್ಯಾಭ್ಯಾಸ ಮಾಡಿದ್ದಾರೆ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ನಮ್ಮ ದೇಶಕ್ಕಾಗಿ ಸಂವಿಧಾನ ಬರೆದಿದ್ದಾರೆ ದಲಿತ ಸಮುದಾಯಕ್ಕೆ ಸೇರಿದ ಅಂಬೇಡ್ಕರ್ ಕುರಿತು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷ ದ ಕಚೇರಿಯಲ್ಲಿ
ಮಾತನಾಡಿದರು
1947 ರಲ್ಲಿ ಭಾರತ ಸ್ವಾತಂತ್ರ ಹೊಂದಿದೆ ಜನವರಿ 26 ಗಣ ರಾಜ್ಯೋತ್ಸವದ
ಮುಖ್ಯ ವ್ಯಕ್ತಿ ದಾದ ಸಾಹೇಬ್ ಅಂಬೇಡ್ಕರ್ ಅವರು
ಅಸಮಾನತೆಯ ವಿರುದ್ಧ ಸಮರ ಸಾರಿದ ಮಹಾನ್ ಚೇತನ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣದಿನದಂದು ಶತ ಶತ ನಮನಗಳನ್ನು ಸಲ್ಲಿಸುತ್ತೇನೆ. ಸಂವಿಧಾನದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತಂದ ಅಂಬೇಡ್ಕರ್ ಅವರು, ಸಕಲರೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾಗಿದ್ದಾರೆ.
ಡಿ ಕೆ ಶಿವಕುಮಾರ್ ಉಪ ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ
ಸಮಸ್ತ ಜನತೆಗೆ ರಾಷ್ಟ್ರೀಯ ಸಂವಿಧಾನ ದಿನದ ಶುಭಾಶಯಗಳು. ಭಾರತೀಯರಿಗೆ ಅತ್ಯಂತ ಮಹತ್ವದ ದಿನವಾದ ಇಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ ಕೊಡುಗೆಯನ್ನು ಸ್ಮರಿಸುತ್ತ, ಗೌರವಪೂರ್ವಕ ಅನಂತ ನಮನಗಳು.
ಭಾರತದ ಪ್ರಜೆಗಳಾದ ನಾವು, ವೈವಿದ್ಯತೆಯಲ್ಲಿ ಏಕತೆಯನ್ನು ಒಳಗೊಂಡ ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದು, ಭ್ರಾತೃತ್ವ, ಸಹೋದರತ್ವ, ಸಾಮರಾಸ್ಯದ ಮನೋಭಾವದೊಂದಿಗೆ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳನ್ನು ಈಡೇರಿಸೋಣ.
ಪರಮೇಶ್ವರ್ ಗೃಹ ಸಚಿವ
#Constitutionday #DrBRAmbedkar
#ConstitutionDay2024
Related Stories
December 19, 2024
December 19, 2024
December 19, 2024